ಪಾಪು ಚೇತರಿಕೆಗೆ ಪ್ರಾರ್ಥಿಸಿ ಧಾರವಾಡದಲ್ಲಿ ವಿಶೇಷ ಪೂಜೆ, ಗಣಹೋಮ - ಧಾರವಾಡ
🎬 Watch Now: Feature Video
ಧಾರವಾಡ: ಅನಾರೋಗ್ಯದ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿರುವ ಹಿರಿಯ ಪತ್ರಕರ್ತ ನಾಡೋಜ ಡಾ.ಪಾಟೀಲ ಪುಟ್ಟಪ್ಪ ಅವರು ಶೀಘ್ರ ಗುಣಮುಖರಾಗಲಿ ಎಂದು ನಗರದಲ್ಲಿ ಪೂಜೆ ಸಲ್ಲಿಸಲಾಯಿತು. ಕರ್ನಾಟಕ ಕಲಾ ಮಹಾವಿದ್ಯಾಲಯದ ಆವರಣದಲ್ಲಿರುವ ಗಣಪತಿ ದೇವಸ್ಥಾನದಲ್ಲಿ ಕರ್ನಾಟಕ ನವ ನಿರ್ಮಾಣ ಸೇನೆ ಜಿಲ್ಲಾ ಕಾರ್ಯಕರ್ತರು ವಿಶೇಷ ಪೂಜೆ ಸಲ್ಲಿಸಿದರು. ಗಣೇಶನ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಾಗೂ ಗಣಹೋಮ ನಡೆಸಿ ಪಾಟೀಲ್ ಪುಟ್ಟಪ್ಪ ಅವರು ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸಿದರು.