ಬೆಳಗಾವಿ: ಕೊರೊನಾ ಲಸಿಕೆ ಪಡೆದ ಕೆಎಲ್ಇ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ - ಕೊರೊನಾ ಲಸಿಕೆ
🎬 Watch Now: Feature Video

ಬೆಳಗಾವಿ: ಕೆಎಲ್ಇ ಕಾರ್ಯಾಧ್ಯಕ್ಷ ಡಾ. ಪ್ರಭಾಕರ ಕೋರೆ ಇಲ್ಲಿನ ಕೆಎಲ್ಇ ಆಸ್ಪತ್ರೆಯಲ್ಲಿ ಕೊರೊನಾ ಲಸಿಕೆ ಪಡೆದಿದ್ದಾರೆ. 3ನೇ ಹಂತದ ವಿತರಣೆ ವೇಳೆ ಮೊದಲ ಡೋಸ್ ಪಡೆದಿದ್ದಾರೆ. ವ್ಯಾಕ್ಸಿನ್ ಪಡೆದ ಬಳಿಕ ಈಟಿವಿ ಭಾರತ ಜೊತೆಗೆ ಮಾತನಾಡಿದ ಡಾ.ಕೋರೆ, 45 ವರ್ಷ ಮೇಲ್ಪಟ್ಟವರಿಗೆ ದೇಶಾದ್ಯಂತ ಕೊರೊನಾ ಲಸಿಕೆ ಹಾಕಲಾಗುತ್ತಿದೆ. ಪತ್ನಿ ಜೊತೆ ಸೇರಿ ನಾನೂ ಕೂಡ ಲಸಿಕೆ ಹಾಕಿಸಿಕೊಂಡಿದ್ದೇನೆ. ನಮ್ಮಲ್ಲಿ ಯಾವುದೇ ಅಡ್ಡಪರಿಣಾಮ ಕಾಣಿಸಿಕೊಂಡಿಲ್ಲ. ಮುಂದಿನವಾರದಿಂದ ಚಿಕ್ಕೋಡಿ ಹಾಗೂ ಗೋಕಾಕ ಕೆಎಲ್ಇ ಆಸ್ಪತ್ರೆಯಲ್ಲಿ ಲಸಿಕೆ ವಿತರಿಸಲಾಗುವುದು ಎಂದಿದ್ದಾರೆ.
Last Updated : Mar 1, 2021, 10:17 PM IST