ನೀಟ್ ಪರೀಕ್ಷೆಯಲ್ಲಿ ದೇಶಕ್ಕೆ 9ನೇ ಸ್ಥಾನ ಗಳಿಸಿದ ಬೀದರ್ ವಿದ್ಯಾರ್ಥಿ ಮನೆಗೆ ಪ್ರಭು ಚೌವ್ಹಾಣ್ ಭೇಟಿ - ರಾಷ್ಟ್ರೀಯ ಅರ್ಹತೆ ಪರೀಕ್ಷೆ ಫಲಿತಾಂಶ ಪ್ರಕಟ
🎬 Watch Now: Feature Video
ರಾಷ್ಟ್ರೀಯ ಅರ್ಹತಾ ಪರೀಕ್ಷೆ (ನೀಟ್)ಯಲ್ಲಿ ದೇಶಕ್ಕೆ 9ನೇ ಸ್ಥಾನ ಪಡೆದು ಅತ್ಯುತ್ತಮ ಸಾಧನೆಗೈದು ರಾಜ್ಯದ ಕೀರ್ತಿ ಹೆಚ್ಚಿಸಿದ ಬೀದರ್ ವಿದ್ಯಾರ್ಥಿ ಕಾರ್ತಿಕ್ ರೆಡ್ಡಿ ನಿವಾಸಕ್ಕೆ ಪಶು ಸಂಗೋಪನಾ ಸಚಿವ ಪ್ರಭು ಚೌವ್ಹಾಣ್ ಭೇಟಿ ನೀಡಿ ಅಭಿನಂದಿಸಿದ್ದಾರೆ. ನಗರದ ಗುಂಪಾ ಬಡಾವಣೆಯಲ್ಲಿರುವ ಕಾರ್ತಿಕ್ ರೆಡ್ಡಿ ನಿವಾಸಕ್ಕೆ ಭೇಟಿ ನೀಡಿ ವಿದ್ಯಾರ್ಥಿಗೆ ಸನ್ಮಾನ ಮಾಡಿ ಗೌರವಿಸಿದರು. ರಾಜ್ಯಕ್ಕೆ ಮೊದಲ ಸ್ಥಾನ ಹಾಗೂ ದೇಶಕ್ಕೆ 9ನೇ ಸ್ಥಾನ ಪಡೆಯುವ ಮೂಲಕ ಶೈಕ್ಷಣಿಕವಾಗಿ ಹಿಂದುಳಿದ ಹಣೆಪಟ್ಟಿ ಬರೆದುಕೊಂಡ ಬೀದರ್ ಜಿಲ್ಲೆಯ ಕೀರ್ತಿಯನ್ನು ರಾಷ್ಟ್ರಮಟ್ಟದಲ್ಲಿ ಹೆಚ್ಚಿಸಿರುವುದು ಸಂತಸದ ಸಂಗತಿ ಎಂದರು.