ಉಪ ಚುನಾವಣೆಯಲ್ಲಿ ಎಲ್ಲಾ 15 ಸ್ಥಾನಗಳಲ್ಲೂ ಬಿಜೆಪಿಗೆ ಗೆಲುವು: ಸಚಿವ ಪ್ರಭು ಚವ್ಹಾಣ ವಿಶ್ವಾಸ - ಲೆಟೆಸ್ಟ್ ಬೀದರ್ ನ್ಯೂಸ್
🎬 Watch Now: Feature Video
ಉಪಚುನಾವಣೆಯಲ್ಲಿ ಎಲ್ಲಾ 15 ಸ್ಥಾನಗಳಲ್ಲೂ ಬಿಜೆಪಿ ಗೆಲುವು ಸಾಧಿಸುವ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಹೀನಾಯ ಸೋಲಾಗಲಿದೆ ಎಂದು ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬೀದರ್ನ ಔರಾದ್ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಅಭಿವೃದ್ಧಿ ಕಾರ್ಯಗಳನ್ನು 6 ಕೋಟಿ ಜನ ನೋಡಿದ್ದಾರೆ. ಹೀಗಾಗಿ ಜನರ ಆಶೀರ್ವಾದ ಪಕ್ಷಕ್ಕಿದ್ದು ಮುಂದಿನ ಮೂರೂವರೆ ವರ್ಷಗಳ ಕಾಲ ಸರ್ಕಾರ ಸುಭದ್ರವಾಗಲಿದೆ ಎಂದರು.