ಪ್ರಹ್ಲಾದ್ ಜೋಶಿಗೆ ಸಚಿವ ಸ್ಥಾನ: ಧಾರವಾಡದಲ್ಲಿ ಅಭಿಮಾನಿಗಳಿಂದ ಸಂಭ್ರಮಾಚರಣೆ - undefined
🎬 Watch Now: Feature Video
ಧಾರವಾಡ: ಮೋದಿ ಸಚಿವ ಸಂಪುಟದಲ್ಲಿ ಸಂಸದ ಪ್ರಹ್ಲಾದ್ ಜೋಶಿಗೆ ಸಚಿವ ಸ್ಥಾನ ಸಿಕ್ಕಿದ್ದಕ್ಕೆ ಜಿಲ್ಲೆಯ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು. ನಗರದ ಬಿಜೆಪಿ ಕಚೇರಿ ಎದುರು ಸಂಭ್ರಮಾಚರಣೆ ಮಾಡಿದ ಪಕ್ಷದ ಕಾರ್ಯಕರ್ತರು ಸಿಹಿ ಹಂಚಿ ಸಂತಸ ಪಟ್ಟರು. ಸತತ ನಾಲ್ಕು ಬಾರಿ ಸಂಸದರಾಗಿ ಆಯ್ಕೆಯಾಗಿರುವ ಪ್ರಹ್ಲಾದ್ ಜೋಶಿಯವರು ಮೊದಲ ಬಾರಿಗೆ ಕೇಂದ್ರ ಸಚಿವ ಸಂಪುಟ ಸೇರ್ಪಡೆಯಾಗಿರುವ ಹಿನ್ನೆಲೆ ಅವರ ಭಾವಚಿತ್ರ ಹಿಡಿದು ಅಭಿಮಾನಿಗಳು ಘೋಷಣೆ ಕೂಗಿದರು.