ಬೆಳಗಾವಿ ಬೈ ಎಲೆಕ್ಷನ್: ಸೈಲೆಂಟ್ ಆಗಿ ಕೈಮುಗಿದ ಪ್ರಮೋದ್ ಮುತಾಲಿಕ್! - ಬೆಳಗಾವಿ ಲೋಕಸಭಾ ಉಪ ಚುನಾವಣೆ,
🎬 Watch Now: Feature Video
ಬೆಳಗಾವಿ ಲೋಕಸಭಾ ಉಪಚುನಾವಣೆ ಟಿಕೆಟ್ ಹಂಚಿಕೆ ವಿಚಾರವಾಗಿ ಶ್ರೀರಾಮಸೇನಾ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಮೌನ ವಹಿಸಿದ್ದಾರೆ. ಕಳೆದ ಎರಡು ದಿನಗಳ ಹಿಂದೆಯಷ್ಟೇ ಹುಬ್ಬಳ್ಳಿಯಲ್ಲಿ ಸುದ್ಧಿಗೋಷ್ಠಿ ನಡೆಸಿ ಸ್ಪರ್ಧಿಸುವುದಾಗಿ ಹಾಗೂ ಬಿಜೆಪಿಯಿಂದ ಟಿಕೆಟ್ ಆಕಾಂಕ್ಷಿಯಾಗಿರುವುದಾಗಿ ಕೂಡ ಹೇಳಿಕೊಂಡಿದ್ದರು. ಆದರೆ, ಇಂದು ಈ ಬಗ್ಗೆ ಪ್ರತಿಕ್ರಿಯೆ ನೀಡದೇ ಪ್ರಮೋದ್ ಮುತಾಲಿಕ್ ಮೌನ ವಹಿಸಿದ್ದಾರೆ. ಬೆಳಗಾವಿ ಟಿಕೆಟ್ ಆಕಾಂಕ್ಷಿಯಾಗಿದ್ದ ಪ್ರಮೋದ್ ಮುತಾಲಿಕ್ ಅವರು, ಚುನಾವಣೆ ಕುರಿತು ಯಾವುದೇ ಪ್ರಶ್ನೆಗೆ ನಾನು ಉತ್ತರಿಸುವುದಿಲ್ಲ ಎಂದು ಪ್ರತಿಕ್ರಿಯೆ ನೀಡದೇ ಮುನ್ನಡೆದರು. ಅಲ್ಲದೇ ಮೊನ್ನೆಯಷ್ಟೇ ನಾನೂ ಕೂಡ ಆಕಾಂಕ್ಷಿ ಎಂದು ಟಿಕೆಟ್ ಸಿಗುವ ಭರವಸೆ ವ್ಯಕ್ತಪಡಿಸಿದ್ದರು. ಆದರೆ, ಇದೀಗ ಈ ಕುರಿತು ಯಾವುದೇ ಪ್ರತಿಕ್ರಿಯೆ ನೀಡದೇ ಮೌನಕ್ಕೆ ಶರಣಾಗಿದ್ದಾರೆ.