ನೀರು ಕಾಯಿಸುವ ವಿದ್ಯುತ್ ಕಾಯಿಲ್ ತಾಗಿ ಗರ್ಭಿಣಿ ಸಾವು - ವಿದ್ಯುತ್ ತಾಗಿ ಗರ್ಭಿಣಿ ಮಹಿಳೆ ಸಾವು
🎬 Watch Now: Feature Video
ದಾವಣಗೆರೆ: ವಿದ್ಯುತ್ ಕಾಯಿಲ್ ತಾಗಿ ಗರ್ಭಿಣಿಯೊಬ್ಬರು ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಹನುಮಂತಾಪುರ ಗೊಲ್ಲರಹಟ್ಟಿ ಗ್ರಾಮದಲ್ಲಿ ನಡೆದಿದೆ. ನೇತ್ರಾವತಿ ಬಸವರಾಜ್ (23) ಎಂಬುವರು ಮೃತ ಗರ್ಭಿಣಿ. ಸ್ನಾನಕ್ಕಾಗಿ ನೀರು ಕಾಯಿಸಲು ಕಾಯಿಲ್ ಹಾಕಿದ್ದ ವೇಳೆ ವಿದ್ಯುತ್ ತಗುಲಿ ಸಾವನ್ನಪ್ಪಿದ್ದಾರೆ. ಪತಿ ಹಾಗೂ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ಜಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.