ಕಾರವಾರದಲ್ಲಿ ಗಿಡ ನೆಡುವ ಮೂಲಕ ಅರ್ಥಪೂರ್ಣ ಪತ್ರಿಕಾ ದಿನಾಚರಣೆ - ಬಾಡ ಸರ್ಕಾರಿ ಐಟಿಐ ಕಾಲೇಜು ಎದುರು ಗಿಡ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-7844010-thumbnail-3x2-news.jpg)
ಕಾರವಾರ: ನಗರದ ಬಾಡ ಸರ್ಕಾರಿ ಐಟಿಐ ಕಾಲೇಜು ಎದುರು ಗಿಡಗಳನ್ನು ನೆಡುವ ಮೂಲಕ ಪತ್ರಿಕಾ ದಿನಾಚರಣೆಯನ್ನು ಸರಳ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರವಾರದ ಜಿಲ್ಲಾ ಕೇಂದ್ರ ಕಾರ್ಯನಿರತ ಪತ್ರಕರ್ತರ ಸಂಘ, ಅರಣ್ಯ ಇಲಾಖೆ ಹಾಗೂ ಬಾಡದ ಸರ್ಕಾರಿ ಕೈಗಾರಿಕಾ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಕಾಲೇಜು ಆವರಣದಲ್ಲಿ ಸುಮಾರು 20ಕ್ಕೂ ಹೆಚ್ಚು ಗಿಡಗಳನ್ನು ನೆಟ್ಟು ಪತ್ರಿಕಾ ದಿನಾಚರಣೆ ಆಚರಿಸಲಾಯಿತು. ಜಿಲ್ಲಾ ಕೇಂದ್ರ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಟಿ.ಬಿ.ಹರಿಕಂತ್ರ, ಐಟಿಐ ಕಾಲೇಜು ಪ್ರಾಂಶುಪಾಲ ಶಂಕರ್ ಮಾಜಾಳಿಕರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.