ಬಸ್ನಲ್ಲಿ ಜನಸಂದಣಿ... ಸಾಮಾಜಿಕ ಅಂತರ ಮರೆತ ಹುಬ್ಬಳ್ಳಿ ಮಂದಿ! - ಹುಬ್ಬಳ್ಳಿ ಲೆಟೆಸ್ಟ್ ನ್ಯೂಸ್
🎬 Watch Now: Feature Video
ಹುಬ್ಬಳ್ಳಿ: ದಿನದಿಂದ ದಿನಕ್ಕೆ ಕೊರೊನಾ ಆರ್ಭಟಿಸುತ್ತಿದ್ರೂ ಜನ ಎಚ್ಚೆತ್ತುಕೊಳ್ಳುತ್ತಿಲ್ಲ. ಎಲ್ಲಾ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಸರ್ಕಾರ ಆದೇಶ ಹೊರಡಿಸಿದೆ. ಅದರಂತೆ ಬಸ್ನಲ್ಲಿ ಇಂತಿಷ್ಟೇ ಪ್ರಯಾಣಿಕರನ್ನು ಕರೆದುಕೊಂಡು ಹೋಗುವಂತೆ ಆದೇಶ ಹೊರಡಿಸಿದೆ. ಆದರೆ ನಗರದಲ್ಲಿ ಸರ್ಕಾರದ ಆದೇಶವನ್ನು ಧಿಕ್ಕರಿಸಿ ಹುಬ್ಬಳ್ಳಿ-ಧಾರವಾಡ ನಡುವೆ ಸಂಚರಿಸುವ ಖಾಸಗಿ ಸಾರಿಗೆ ಬಸ್ ಸಿಬ್ಬಂದಿಯು ಪ್ರಯಾಣಿಕರನ್ನು ಕುರಿಗಳಂತೆ ತುಂಬಿಕೊಂಡು ಸಂಚರಿಸುತ್ತಿದ್ದಾರೆ. ಇದನ್ನು ಪ್ರಯಾಣಿಕರೊಬ್ಬರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿ ಬಿಟ್ಟಿದ್ದಾರೆ. ಸರ್ಕಾರ ಕೂಡಲೇ ಬಸ್ ಮಾಲೀಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.