ಕರ್ತವ್ಯನಿರತ ವೈದ್ಯರ ಮೇಲೆ ಹಲ್ಲೆಗೆ ಖಂಡನೆ: ಚಿಕ್ಕಮಗಳೂರಿನಲ್ಲಿ ಖಾಸಗಿ ಒಪಿಡಿ ಬಂದ್ - ಚಿಕ್ಕಮಗಳೂರಿನಲ್ಲಿ ಖಾಸಗಿ ಆಸ್ವತ್ರೆಗಳ ಒಪಿಡಿ ಬಂದ್
🎬 Watch Now: Feature Video
ಮಿಂಟೋ ಆಸ್ಪತ್ರೆಯಲ್ಲಿ ಕರ್ತವ್ಯನಿರತ ವೈದ್ಯರ ಮೇಲೆ ನಡೆದಿದೆ ಎನ್ನಲಾದ ಹಲ್ಲೆ ಖಂಡಿಸಿ ಭಾರತೀಯ ವೈದ್ಯಕೀಯ ಸಂಘವು ಕರೆ ನೀಡಿರುವ ಹೊರರೋಗಿ ವಿಭಾಗದ ಬಂದ್ಗೆ ಜಿಲ್ಲೆಯಲ್ಲಿ ಉತ್ತಮ ಬೆಂಬಲ ವ್ಯಕ್ತವಾಗಿದೆ. ಜಿಲ್ಲೆಯಲ್ಲಿರುವ ಖಾಸಗಿ ಆಸ್ಪತ್ರೆಗಳ ಒಪಿಡಿ ಬಂದ್ ಮಾಡುವ ಮೂಲಕ ವೈದ್ಯರ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಜಿಲ್ಲೆಯ 25ಕ್ಕೂ ಹೆಚ್ಚು ಆಸ್ಪತ್ರೆಗಳ ಒಪಿಡಿ ಬಂದ್ ಮಾಡಲಾಗಿದ್ದು, ಬೆಳಗ್ಗೆ 6 ಗಂಟೆಯಿಂದ ನಾಳೆ ಬೆಳಗ್ಗೆ 6 ಗಂಟೆವರೆಗೂ ಒಪಿಡಿ ಸೇವೆ ಬಂದ್ ಮಾಡಿ ಈ ಮುಷ್ಕರಕ್ಕೆ ಬೆಂಬಲ ಸೂಚಿಸಲಾಗಿದೆ. ಕೇವಲ ತುರ್ತುಸೇವೆಯನ್ನು ಮಾತ್ರ ಖಾಸಗಿ ಆಸ್ಪತ್ರೆಯವರು ರೋಗಿಗಳಿಗೆ ನೀಡುತ್ತಿದ್ದು 24 ಗಂಟೆಗಳ ಕಾಲ ಬಂದ್ ಮುಂದುವರೆಯಲಿದೆ.