ಕನ್ನಡಿಗರಿಗೆ ಉದ್ಯೋಗ ಮೀಸಲಾತಿಗೆ ಆಗ್ರಹಿಸಿ ಕನ್ನಡ ಪರ ಸಂಘಟನೆಗಳ ಪ್ರತಿಭಟನೆ
🎬 Watch Now: Feature Video
ಬೆಂಗಳೂರು: ಕನ್ನಡಿಗರಿಗೆ ರಾಜ್ಯದಲ್ಲಿ ಉದ್ಯೋಗ ಮೀಸಲಾತಿ ನೀಡುವಂತೆ ಆಗ್ರಹಿಸಿ ಕನ್ನಡ ಪರ ಸಂಘಟನೆಗಳಿಂದ ಮೌರ್ಯ ಸರ್ಕಲ್ನಲ್ಲಿ ಪ್ರತಿಭಟನೆ ನಡೆಸಲಾಯಿತು. ಹೋರಾಟಗಾರರು ವಿಧಾನಸಭೆಗೆ ಹೋಗಲು ಯತ್ನಿಸಿದ ವೇಳೆ ತಡೆದ ಪೊಲೀಸರು, ಪ್ರತಿಭಟನೆ ಹಿಂಪಡೆಯಲು ಮನವಿ ಮಾಡಿದರು. ಆದರೂ ಪ್ರತಿಭಟನೆ ಮುಂದಾದ ಕಾರಣ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.