ವಿರಾಜಪೇಟೆ: ಆಕಸ್ಮಿಕವಾಗಿ ಬಾವಿಗೆ ಬಿದ್ದಿದ್ದ ವ್ಯಕ್ತಿಯ ರಕ್ಷಣೆ - virajpete kodagu latest news
🎬 Watch Now: Feature Video
ವಿರಾಜಪೇಟೆ (ಕೊಡಗು): ಆಕಸ್ಮಿಕವಾಗಿ ಬಾವಿಗೆ ಬಿದ್ದಿದ್ದ ವ್ಯಕ್ತಿಯನ್ನು ರಕ್ಷಿಸಿರುವ ಘಟನೆ ವಿರಾಜಪೇಟೆ ತಾಲೂಕಿನ ಕರಡಿಗೋಡು ಗ್ರಾಮದಲ್ಲಿ ನಡೆದಿದೆ. ಕರಡಿಗೋಡು ಗ್ರಾಮದ ನಿವಾಸಿ ಕೃಷ್ಣ (55) ಬಾವಿಗೆ ಆಕಸ್ಮಿಕವಾಗಿ ಬಿದ್ದಿದ್ದರು. ಬಾವಿಗೆ ಬಿದ್ದು ಪರದಾಡುತ್ತಿದ್ದ ಅವರನ್ನು ಗಮನಿಸಿದ ಸ್ಥಳೀಯರು ಅಗ್ನಿಶಾಮಕ ಸಿಬ್ಬಂದಿಗೆ ವಿಷಯ ತಿಳಿಸಿದ್ದಾರೆ. ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಕೃಷ್ಣ ಅವರನ್ನು ರಕ್ಷಿಸಿದ್ದಾರೆ. ಕೃಷ್ಣ ಅವರಿಗೆ ಚಿಕ್ಕಪುಟ್ಟ ಗಾಯಗಳಾಗಿವೆ.