ಕಾರವಾರ: ಮನೆಯಲ್ಲಿ ಅವಿತಿದ್ದ 14 ಅಡಿ ಉದ್ದದ ಕಾಳಿಂಗ ಸೆರೆ! - ಕಾರವಾರ ಲೇಟೆಸ್ಟ್ ನ್ಯೂಸ್
🎬 Watch Now: Feature Video
ಕಾರವಾರ: ಮನೆಯೊಂದರ ಸ್ನಾನದ ಕೊಠಡಿಯಲ್ಲಿ ಅವಿತುಕೊಂಡಿದ್ದ ಬೃಹತ್ ಕಾಳಿಂಗ ಸರ್ಪವೊಂದನ್ನು ರಕ್ಷಿಸಿ ಕಾಡಿಗೆ ಬಿಟ್ಟ ಘಟನೆ ಕುಮಟಾ ತಾಲೂಕಿನ ಉಳ್ಳೂರಮಠದಲ್ಲಿ ನಡೆದಿದೆ. ಸುಮಾರು 14 ಅಡಿ ಉದ್ದದ 9 ಕೆಜಿ ತೂಕದ ಕಾಳಿಂಗ ಸರ್ಪವೊಂದು ತಾಲೂಕಿನ ಉಳ್ಳೂರಮಠದ ಮನೆಯೊಂದರ ಸ್ನಾನದ ಕೊಠಡಿಯಲ್ಲಿ ಸೇರಿಕೊಂಡಿತ್ತು. ಕುಟುಂಬಸ್ಥರು ತಕ್ಷಣ ಅರಣ್ಯ ಇಲಾಖೆಗೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಬಳಿಕ ಉರಗತಜ್ಞ ಪವನ ನಾಯ್ಕ ಅವರೊಂದಿಗೆ ತಕ್ಷಣ ಸ್ಥಳಕ್ಕಾಗಮಿಸಿದ ಅರಣ್ಯಾಧಿಕಾರಿಗಳು ಹಾವನ್ನು ಹಿಡಿದು ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ. ಹಾವನ್ನು ಕಂಡರೆ ಅವುಗಳನ್ನು ಹೊಡೆಯದೆ ತಕ್ಷಣ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿ ಎಂದು ಸಾರ್ವಜನಿಕರಲ್ಲಿ ಉರಗತಜ್ಞ ಪವನ ನಾಯ್ಕ ಮನವಿ ಮಾಡಿಕೊಂಡರು.