ಕೊಪ್ಪಳ: ಹಳ್ಳದಲ್ಲಿ ಕೊಚ್ಚಿ ಹೋಗುತ್ತಿದ್ದ ವ್ಯಕ್ತಿಯ ರಕ್ಷಣೆ... ವಿಡಿಯೋ
🎬 Watch Now: Feature Video
ಕೊಪ್ಪಳ: ರಭಸವಾಗಿ ಹರಿಯುತ್ತಿದ್ದ ನೀರಿನಲ್ಲಿ ಕೊಚ್ಚಿಕೊಂಡು ಹೋಗುತ್ತಿದ್ದ ಬೈಕ್ ಸವಾರನನ್ನು ರಕ್ಷಿಸಿದ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ತಾಲೂಕಿನ ಹುಲಗಿ - ಶಿವಪುರ ಗ್ರಾಮದ ಮಧ್ಯದಲ್ಲಿರುವ ಹಳ್ಳದಲ್ಲಿ ಘಟನೆ ನಡೆದಿದೆ. ಎರಡು ದಿನಗಳ ಹಿಂದೆ ಸುರಿದ ಮಳೆಯಿಂದ ಹಳ್ಳದಲ್ಲಿ ಅಪಾರ ಪ್ರಮಾಣದಲ್ಲಿ ನೀರು ಹರಿಯುತ್ತಿತ್ತು. ಈ ಸಂದರ್ಭದಲ್ಲಿ ಹುಲಗಿ ಗ್ರಾಮದ ಹನುಮಂತಪ್ಪ ಭೋವಿ ಎಂಬುವವರು ಸೆ. 30ರಂದು ಸಂಜೆ ಆ ಮಾರ್ಗವಾಗಿ ಬೈಕ್ ಮೂಲಕ ಹಳ್ಳ ದಾಟಿಕೊಂಡು ಹುಲಗಿಗೆ ಹೋಗುತ್ತಿದ್ದಾಗ ನೀರಿನ ರಭಸಕ್ಕೆ ಕೊಚ್ಚಿಕೊಂಡು ಹೋಗಿದ್ದಾರೆ. ಆಗ ಹಳ್ಳದಲ್ಲಿ ಸಿಕ್ಕ ಸಣ್ಣ ಗಿಡಗಂಟೆಗಳನ್ನು ಹಿಡಿದುಕೊಂಡು ನಿಂತಿದ್ದಾರೆ. ಇದನ್ನು ನೋಡಿದ ಸ್ಥಳೀಯರು ಹಗ್ಗದ ಸಹಾಯದಿಂದ ಹನುಮಂತಪ್ಪನನ್ನು ರಕ್ಷಣೆ ಮಾಡಿದ್ದಾರೆ. ಬೈಕ್ ಕೊಚ್ಚಿಕೊಂಡು ಹೋಗಿದ್ದು, ಇನ್ನೂ ಪತ್ತೆಯಾಗಿಲ್ಲ.