ಸಿಎಎ,ಎನ್ಆರ್ಸಿ -ಎನ್ಪಿಆರ್ ವಿರುದ್ಧ ಪ್ರತಿಭಟನೆ - ಬೆಂಗಳೂರು ಸಿಎಎ,ಎನ್ಆರ್ಸಿ ಮತ್ತು ಎನ್ಪಿಆರ್ ಪ್ರತಿಭಟನೆ
🎬 Watch Now: Feature Video
ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತರಲು ಮುಂದಾಗಿರುವ ಸಿಎಎ, ಎನ್ಆರ್ಸಿ ಮತ್ತು ಎನ್ಪಿಆರ್ ವಿರುದ್ಧ ಇಂದು ಬೃಹತ್ ಪ್ರತಿಭಟನೆ ನಡೆಸಲಾಯಿತು. ಸಿವಿ ರಾಮನ್ ನಗರ ಸಿಟಿಜನ್ ಯುನಿಟಿ ಫೋರಂನಿಂದ ಹಲಸೂರು ಫುಟ್ಬಾಲ್ ಗ್ರೌಂಡ್ನಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಹಲವರು ಭಾಗವಹಿಸಿದ್ದರು. ಅಲ್ಪಸಂಖ್ಯಾತ ಮುಸಲ್ಮಾನರನ್ನೇ ಗುರಿಯಾಗಿಸಿಕೊಂಡು ಈ ಕಾನೂನುಗಳನ್ನು ತರಲಾಗುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಇನ್ನು ಕಾರ್ಯಕ್ರಮದಲ್ಲಿ ಶಾಸಕರಾದ ಎನ್.ಎ ಹ್ಯಾರಿಸ್, ರಿಜ್ವಾನ್ ಅರ್ಷದ್ ಭಾಗವಹಿಸಿದ್ದರು.