ಡಿಕೆಶಿ ಸ್ವಗ್ರಾಮ ದೊಡ್ಡಾಲಹಳ್ಳಿಯಲ್ಲಿ ಪ್ರತಿಭಟನೆ: ಪಲ್ಸರ್ ಬೈಕ್ ಸುಟ್ಟು ಆಕ್ರೋಶ - ramanagara

🎬 Watch Now: Feature Video

thumbnail

By

Published : Sep 5, 2019, 7:40 PM IST

ರಾಮನಗರ: ಡಿ.ಕೆ.ಶಿವಕುಮಾರ್ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿ ವಶಕ್ಕೆ ಪಡೆದ ಹಿನ್ನೆಲೆಯಲ್ಲಿ ಇಂದು ರಾಮನಗರ ಜಿಲ್ಲಾ ಬಂದ್​ಗೆ ಕರೆ ನೀಡಲಾಗಿತ್ತು. ಬಂದ್ ವೇಳೆ ಡಿ.ಕೆ.ಶಿವಕುಮಾರ್ ಸ್ವಗ್ರಾಮ‌ ದೊಡ್ಡಾಲಹಳ್ಳಿಯಲ್ಲಿ ಅಭಿಮಾನಿಗಳು ಬೈಕೊಂದಕ್ಕೆ ಬೆಂಕಿ ಹಚ್ಚಿ ತಮ್ಮ ಆಕ್ರೋಶ ಹೊರಹಾಕಿದ್ದಾರೆ. ದೊಡ್ಡಾಲಹಳ್ಳಿಯಲ್ಲಿನ ಸಂಗಮ ರಸ್ತೆ ಸರ್ಕಲ್​ನಲ್ಲಿ ಪ್ರತಿಭಟನೆ‌ ನಡೆಸಿದ ಪ್ರತಿಭಟನಾಕಾರರು ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರ ವಿರುದ್ದ ಘೋಷಣೆಗಳನ್ನು ಕೂಗಿ‌ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಟೈರ್​​ಗೆ ಬೆಂಕಿ ಹಚ್ಚಿ ಘೋಷಣೆ ಕೂಗುವಾಗ ಪಲ್ಸರ್ ಬೈಕೊಂದನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.