ಐಟಿ ದಾಳಿ ಖಂಡಿಸಿ ಮದ್ದೂರಲ್ಲಿ ಜೆಡಿಎಸ್ ಕಾರ್ಯಕರ್ತರ ಪ್ರತಿಭಟನೆ - kannada news
🎬 Watch Now: Feature Video
ಮಂಡ್ಯ: ಜಿಲ್ಲಾ ಪಂಚಾಯತ್ ಅಧ್ಯಕ್ಷೆ ನಾಗರತ್ನ ಸ್ವಾಮಿ ಅವರ ಮೇಲಿನ ಐಟಿ ದಾಳಿ ಖಂಡಿಸಿ ಎಸ್.ಪಿ. ಸ್ವಾಮಿ ಅವರ ಅಭಿಮಾನಿಗಳು, ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಮದ್ದೂರಿನಲ್ಲಿ ಬೆಂಗಳೂರು-ಮೈಸೂರು ಹೆದ್ದಾರಿಯನ್ನು 20 ನಿಮಿಷ ತಡೆದು ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರ, ಪ್ರಧಾನಿ ಮೋದಿ, ಐಟಿ ಅಧಿಕಾರಿಗಳ ವಿರುದ್ಧ ಘೋಷಣೆಗಳನ್ನು ಕೂಗಿದರು. ಪ್ರತಿಭಟನೆಯಿಂದ ಬೆಂಗಳೂರು-ಮೈಸೂರು ಹೆದ್ದಾರಿ ಸಂಚಾರ ಅಸ್ತವ್ಯಸ್ತವಾಗಿತ್ತು.