ಎನ್ಆರ್ಸಿ, ಸಿಎಎ, ಎನ್ಪಿಆರ್ ಕಾಯ್ದೆ ವಿರೋಧಿಸಿ ಪಂಜಿನ ಮೆರವಣಿಗೆ! - ಉಡುಪಿಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪಂಜಿನ ಮೆರವಣಿಗೆ ನ್ಯೂಸ್
🎬 Watch Now: Feature Video

ಕೇಂದ್ರ ಸರಕಾರದ ಎನ್ಆರ್ಸಿ, ಸಿಎಎ, ಎನ್ಪಿಆರ್ ಕಾಯ್ದೆಯ ವಿರುದ್ಧ ಉಡುಪಿಯಲ್ಲಿ ಪಂಜಿನ ಮೆರವಣಿಗೆ ನಡೆಯಿತು. ಕರ್ನಾಟಕ ದಲಿತ ಸಂಘರ್ಷ ಸಮಿತಿ ಬೆಂಕಿ ಪ್ರತಿಭಟನೆಯ ಕರೆ ನೀಡಿದ್ದು, ನೂರಾರು ಜನ ಪ್ರತಿಭಟನೆಯಲ್ಲಿ ಪಾಲ್ಗೊಂಡರು. ನಗರದ ಅಜ್ಜರಕಾಡು ಹುತಾತ್ಮ ಸೈನಿಕರ ಯುದ್ಧ ಸ್ಮಾರಕ ಬಳಿ ಪಂಜಿನ ಮೆರವಣಿಗೆಗೆ ಚಾಲನೆ ನೀಡಿದರು. ನಗರದ ಪುರಭವನ ರಸ್ತೆಯವರೆಗೆ ಪಂಜು ಹಿಡಿದು ಮೆರವಣಿಗೆ ಮಾಡಿದರು. ಕೇಂದ್ರ ಸರಕಾರ, ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ದೇಶಾದ್ಯಂತ ಕಾಯ್ದೆ ವಿರೋಧಿ ಹೋರಾಟ ಆರಂಭವಾಗಿದ್ದು, ಪ್ರತಿಭಟನೆ ಅಲ್ಲಲ್ಲಿ ನಿರಂತರವಾಗಿ ನಡೆಯಲಿದೆ ಎಂದು ಸಂಘಟನೆಗಳು ಎಚ್ಚರಿಕೆ ನೀಡಿದವು.
TAGGED:
panju procession in udupi