ಸುರಪುರದಲ್ಲಿ ದಲಿತ ಸೇನೆಯಿಂದ ಟೈರ್ಗೆ ಬೆಂಕಿ ಹಚ್ಚಿ ಬೃಹತ್ ಪ್ರತಿಭಟನೆ - ಲೆಟೆಸ್ಟ್ ಯಾದಗಿರಿ ಪ್ರೊಟೆಸ್ಟ್ ನ್ಯೂಸ್
🎬 Watch Now: Feature Video
ಯಾದಗಿರಿ: ಶಿಕ್ಷಣ ಇಲಾಖೆಯ ಸುತ್ತೋಲೆಯಲ್ಲಿ ಅಂಬೇಡ್ಕರ್ ಅವರಿಗೆ ಅವಮಾನಿಸಲಾಗಿದೆ ಎಂದು ಆರೋಪಿಸಿ ಸುರಪುರದಲ್ಲಿ ಗುರುವಾರ ದಲಿತ ಸೇನೆ ಮತ್ತು ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಟೈರ್ಗೆ ಬೆಂಕಿ ಹಚ್ಚಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ನಗರದ ಅಂಬೇಡ್ಕರ್ ವೃತ್ತದಿಂದ ಪ್ರಮುಖ ಬೀದಿಗಳ ಮೂಲಕ ಮಹಾತ್ಮ ಗಾಂಧಿ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ಸಾಗಿತು. ಶಿಕ್ಷಣ ಇಲಾಖೆಯ ಕಾರ್ಯದರ್ಶಿ ಮತ್ತು ಆಯುಕ್ತರನ್ನು ಕೆಲಸದಿಂದ ವಜಾಗೊಳಿಸಬೇಕು ಹಾಗೂ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದರು.