ಇಡಿಜಿಎಸ್ ತಂತ್ರಾಂಶ ಬಳಸಿ ಅಂಕಪಟ್ಟಿ ವಿತರಣೆ, ಹೆಚ್ಚು ಹಣ ವಸೂಲಿ ಖಂಡಿಸಿ ಎಬಿವಿಪಿ ಪ್ರತಿಭಟನೆ - bellary student protest news
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-5001999-thumbnail-3x2-lek.jpg)
ರಾಜ್ಯಾದ್ಯಂತ ವಿಶ್ವವಿದ್ಯಾಲಯದಲ್ಲಿ ಇಲೆಕ್ಟ್ರಾನಿಕ್ ಡಾಕ್ಯುಮೆಂಟ್ ಜನರೇಶನ್ ಸಿಸ್ಟಂ (ಇಡಿಜಿಎಸ್) ತಂತ್ರಾಂಶ ಬಳಸುವ ಹೆಸರಿನಲ್ಲಿ ಪ್ರತಿ ಅಂಕಪಟ್ಟಿಗೆ 156 ರೂ. ಗಳನ್ನು ವಿದ್ಯಾರ್ಥಿಗಳಿಂದ ವಸೂಲಿ ಮಾಡುವುದನ್ನು ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಬಳ್ಳಾರಿಯಲ್ಲಿ ಪ್ರತಿಭಟನೆ ಮಾಡಿದರು. ರಾಜ್ಯ ಸರ್ಕಾರ ಕೂಡಲೇ ಇಡಿಜಿಎಸ್ ನಿರ್ಧಾರವನ್ನು ಕೈಬಿಡಬೇಕು, ಅಂಕಪಟ್ಟ ತಯಾರಿಕೆಗೆ ವೈಜ್ಞಾನಿಕ ಬೆಲೆ ನಿಗದಿ ಮಾಡಬೇಕು. ರಾಜ್ಯದ ವಿವಿಧ ವಿಶ್ವವಿದ್ಯಾಲಯದ ಸಂಪನ್ಮೂಲ ವ್ಯಕ್ತಿಗಳನ್ನು ಬಳಸಿಕೊಂಡು ಡಿಜಿಟಲೀಕರಣ ಮಾಡಲು ಮುಂದಾಗಬೇಕೆಂದು ಒತ್ತಾಯಿಸಿದರು.