ಇಂದಿರಾ ಕ್ಯಾಂಟೀನ್ ಪ್ರಾರಂಭಕ್ಕೆ ಶಾಸಕ ಹಾಲಪ್ಪ ಅಡ್ಡಿ ಆರೋಪ: ವಿಭಿನ್ನ ರೀತಿಯಲ್ಲಿ ಪ್ರತಿಭಟನೆ - ಸಾಗರ ಶಾಸಕ ಹರತಾಳು ಹಾಲಪ್ಪ ದ್ವೇಷದ ರಾಜಕಾರಣ
🎬 Watch Now: Feature Video
ರಾಜ್ಯದ ಬಡವರಿಗೆ ಅನುಕೂಲವಾಗಲೆಂದು ಸಿದ್ದರಾಮಯ್ಯನವರು ಪ್ರಾರಂಭಿಸಿದ್ದ ಇಂದಿರಾ ಕ್ಯಾಂಟೀನ್ಅನ್ನು ಸಾಗರ ಶಾಸಕ ಹರತಾಳು ಹಾಲಪ್ಪ ದ್ವೇಷದ ರಾಜಕಾರಣ ಮಾಡುತ್ತಾ ಪ್ರಾರಂಭ ಮಾಡುತ್ತಿಲ್ಲ. ಇದು ಬಡವರಿಗೆ ಮಾಡುತ್ತಿರುವ ಅನ್ಯಾಯವಾಗಿದೆ ಎಂದು ಆರೋಪಿಸಿದರು. ಅಲ್ಲದೆ ತಕ್ಷಣವೇ ಇಂದಿರಾ ಕ್ಯಾಂಟೀನ್ ಪ್ರಾರಂಭಿಸಬೇಕು ಎಂದು ಪರಮೇಶ್ವರ ದಿಗೂರು ನೇತೃತ್ವದಲ್ಲಿ ದಲಿತ ಸಂಘರ್ಷ ಸಮಿತಿ ವತಿಯಿಂದ ಸಾಗರದಲ್ಲಿ ಪ್ರತಿಭಟನೆ ನಡೆಸಲಾಗಿದೆ. ನಗರದ ಜೋಗ ರಸ್ತೆಯಲ್ಲಿನ ಇಂದಿರಾ ಕ್ಯಾಂಟೀನ್ ಕಟ್ಟಡದ ಮುಂದೆ ಅಡುಗೆ ಮಾಡಿ ತಮ್ಮ ಆಕ್ರೋಶ ಹೊರಹಾಕಿದ್ದಾರೆ.