ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಸಿಬ್ಬಂದಿ ಅಮಾನತು: ಉಪವಾಸ ಸತ್ಯಾಗ್ರಹ - Hubballi news 2020
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-7912220-370-7912220-1594021227903.jpg)
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಸಿಬ್ಬಂದಿ ಪಕ್ಕೀರಯ್ಯ ನವಲಗುಂದಮಠ ಅವರನ್ನು ಹುದ್ದೆಯಿಂದ ಅಮಾನತು ಮಾಡಿರುವುದನ್ನು ಖಂಡಿಸಿ ಗೋಕುಲ್ ರಸ್ತೆಯಲ್ಲಿ ಕರ್ನಾಟಕ ದಲಿತ ರಕ್ಷಣಾ ವೇದಿಕೆ ಹಾಗೂ ಕರ್ನಾಟಕ ರಾಜ್ಯ ಅನ್ನದಾತ ರೈತ ಸಂಘದ ಸಹಯೋಗದಲ್ಲಿ ಇಂದು ಉಪವಾಸ ಸತ್ಯಾಗ್ರಹ ಮಾಡಲಾಯಿತು. ನೌಕರನನ್ನು ಉನ್ನತ ಅಧಿಕಾರಿಗಳು ಕ್ಷುಲ್ಲಕ ಕಾರಣಕ್ಕೆ ಅಮಾನತು ಮಾಡಿರುವುದು ಹಾಗೂ ಕಿರುಕುಳ ನೀಡುತ್ತಿರುವುದು ಖಂಡನೀಯವಾಗಿದೆ ಎಂದ ಪ್ರತಿಭಟನಾಕಾರರು, ಕೂಡಲೇ ಅವರಿಗೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದರು.