ಅಕ್ರಮ ಕಸಾಯಿಖಾನೆಗಳನ್ನು ತೆರವುಗೊಳಿಸಲು ಆಗ್ರಹ: ಶ್ರೀರಾಮ ಸೇನೆ ಕಾರ್ಯಕರ್ತರ ಪ್ರತಿಭಟನೆ - ಗೋಹತ್ಯೆ ನಿಷೇಧ ಕಾಯ್ದೆ
🎬 Watch Now: Feature Video
ದಾವಣಗೆರೆ: ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೊಳಿಸಲು ಹಾಗೂ ಜಿಲ್ಲೆಯಲ್ಲಿರುವ ಅಕ್ರಮ ಕಸಾಯಿಖಾನೆಗಳನ್ನು ತೆರವುಗೊಳಿಸಲು ಆಗ್ರಹಿಸಿ, ತಾಲೂಕು ಶ್ರೀರಾಮ ಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಜಿಲ್ಲೆಯ ಜಯದೇವ ವೃತ್ತದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ ಶ್ರೀರಾಮ ಸೇನೆ ರಾಜ್ಯ ಕಾರ್ಯಾಧ್ಯಕ್ಷ ಗಂಗಾಧರ ಕುಲಕರ್ಣಿ ಮಾತನಾಡಿ, ಜಿಲ್ಲೆಯಲ್ಲಿ ಹಲವಾರು ಕಡೆ ಅಕ್ರಮ ಕಸಾಯಿಖಾನೆಗಳಿವೆ. ಈ ಬಗ್ಗೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ ಅಧಿಕಾರಿಗಳು ನಿರ್ಲಕ್ಷ್ಯ ಮಾಡುತ್ತಿದ್ದಾರೆ. ಕೂಡಲೇ ಗೋಹತ್ಯೆ ನಿಷೇಧ ಕಾಯ್ದೆಯನ್ನು ಜಾರಿಗೊಳಿಸಬೇಕು, ತಪ್ಪಿದ್ದಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು. ಪ್ರತಿಭಟನೆಯಲ್ಲಿ ಶ್ರೀರಾಮಸೇನೆ ರಾಜ್ಯ ಸಂಪರ್ಕ ಪ್ರಮುಖ್ ಪರಶುರಾಮ ನಡುಮನಿ ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.