ಬೆಲೆ ಏರಿಕೆ ನಿಯಂತ್ರಣಕ್ಕೆ ಆಗ್ರಹಿಸಿ ಬಿಲ್ಡರ್ಸ್ ಅಸೋಸಿಯೇಷನ್ ಆಫ್ ಇಂಡಿಯಾ ವತಿಯಿಂದ ಪ್ರತಿಭಟನೆ - ಶಿವಮೊಗ್ಗ ಲೇಟೆಸ್ಟ್ ನ್ಯೂಸ್
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-10599133-thumbnail-3x2-smg.jpg)
ಶಿವಮೊಗ್ಗ: ಸಿಮೆಂಟ್, ಸ್ಟೀಲ್ ಬೆಲೆ ಏರಿಕೆ ನಿಯಂತ್ರಣಕ್ಕಾಗಿ ರಾಷ್ಟ್ರೀಯ ಮಟ್ಟದ ಪ್ರಾಧಿಕಾರ ರಚಿಸಬೇಕು ಎಂದು ಆಗ್ರಹಿಸಿ ಬಿಲ್ಡರ್ಸ್ ಅಸೋಸಿಯೇಷನ್ ಆಫ್ ಇಂಡಿಯಾ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. ಸಿಮೆಂಟ್, ಸ್ಟೀಲ್ ಬೆಲೆ ಏರಿಕೆ ಆಗುತ್ತಿದ್ದು, ಜನಸಾಮಾನ್ಯರು ಸೇರಿದಂತೆ ಗುತ್ತಿಗೆದಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹಾಗಾಗಿ ಕೇಂದ್ರ ಸರ್ಕಾರ ಸಿಮೆಂಟ್ ಮತ್ತು ಸ್ಟೀಲ್ ಬೆಲೆ ಏರಿಕೆ ನಿಯಂತ್ರಣಕ್ಕಾಗಿ ರಾಷ್ಟ್ರೀಯಮಟ್ಟದ ಪ್ರಾಧಿಕಾರವನ್ನು ರಚಿಸುವ ಮೂಲಕ ಬೆಲೆ ಏರಿಕೆಯನ್ನು ನಿಯಂತ್ರಣಕ್ಕೆ ತರಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.