ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ - 2A reservation for Panchamsali society
🎬 Watch Now: Feature Video

ಹುಬ್ಬಳ್ಳಿ : ಲಿಂಗಾಯತ ಹಾಗೂ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡುವಂತೆ ಒತ್ತಾಯಿಸಿ ಹುಬ್ಬಳ್ಳಿ- ಧಾರವಾಡ ಪಂಚಮಸಾಲಿ ಸಮಾಜದ ಮುಖಂಡರು ಪ್ರತಿಭಟನೆ ನಡೆಸಿದರು. ಸಮಾಜದ ಏಳಿಗೆಗಾಗಿ ರಾಜ್ಯ ಹಾಗೂ ಕೇಂದ್ರ ಸರ್ಕಾರ 2ಎ ಮೀಸಲಾತಿ ನೀಡಬೇಕು ಎಂದು ಒತ್ತಾಯಿಸಿ ತಹಶೀಲ್ದಾರ್ಗೆ ಮನವಿ ಸಲ್ಲಿಸಿದರು. ಈ ವೇಳೆ ಸದಾನಂದ ಡಂಗನವರ, ಶಂಕರ ಮಲಕಣ್ಣವರ, ಈಶ್ವರ ಶಿರಸಂಗಿ, ಗಂಗಾಧರ ಸೇರಿ ಇತರರು ಉಪಸ್ಥಿತರಿದ್ದರು.