ವಿದ್ಯಾರ್ಥಿನಿ ಕೊಲೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಪ್ರತಿಭಟನೆ - Death penalty
🎬 Watch Now: Feature Video
ಬಾಗಲಕೋಟೆ: ಮುಧೋಳ ತಾಲೂಕಿನ ವಜ್ಜರಮಟ್ಟಿ ಗ್ರಾಮದ ವಿದ್ಯಾರ್ಥಿನಿ ಕೊಲೆ ಪ್ರಕರಣವನ್ನು ಖಂಡಿಸಿ ಭೀಮವಾದ ಸಂಘಟನೆ ಹಾಗೂ ಇತರೆ ಸ್ಥಳೀಯ ಸಂಘನೆಗಳಿಂದ ಕಲಾದಗಿ ಗ್ರಾಮವನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಲಾಯಿತು. ಯುವತಿ ಮೇಲೆ ಅತ್ಯಾಚಾರವೆಸಗಿ ಹತ್ಯೆ ಮಾಡಿದ್ದಾರೆ ಎಂದು ಆರೋಪಿಸಿ ಕಲಾದಗಿ ಗ್ರಾಮದ ಬಸ್ ನಿಲ್ದಾಣ ವ್ಯಾಪ್ತಿಯ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿಸಿ, ಪ್ರಮುಖ ರಸ್ತೆಗಳಲ್ಲಿ ಪ್ರತಿಭಟನೆ ನಡೆಸಲಾಯಿತು. ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದರು.