ಕಾಲೇಜುಗಳಲ್ಲಿ ಮಧ್ಯಾಹ್ನದ ಪೌಷ್ಟಿಕ ಆಹಾರ ನೀಡಲು ಒತ್ತಾಯ: ಚಿತ್ರದುರ್ಗದಲ್ಲಿ ಪ್ರೊಟೆಸ್ಟ್ - chitradurga latest news
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-5964913-thumbnail-3x2-ctddd.jpg)
ರಾಜ್ಯದ ಬಹುತೇಕ ಸರ್ಕಾರಿ ಹಾಗೂ ಅನುದಾನಿತ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ವೇಳೆ ಪೌಷ್ಟಿಕಾಹಾರ ನೀಡುವಂತೆ ಸರ್ಕಾರಕ್ಕೆ ವಿದ್ಯಾರ್ಥಿಗಳು ಪ್ರತಿಭಟನೆ ಮಾಡುವ ಮೂಲಕ ಒತ್ತಾಯಿಸಿದರು. ನಗರದ ಒನಕೆ ಓಬವ್ವ ವೃತ್ತದಲ್ಲಿ ಸೇರಿದ್ದ ನೂರಾರು ವಿದ್ಯಾರ್ಥಿಗಳು ಪೌಷ್ಟಿಕಾಹಾರ ಬೇಕೇ-ಬೇಕು ಎಂದು ಕೂಗಿದರು. ಕರ್ನಾಟಕ ಯುವ ಮುನ್ನಡೆ ಸಂಘಟನೆಯ ನೇತೃತ್ವದಲ್ಲಿ ನಡೆದ ಪ್ರತಿಭಟನಾ ಮೆರವಣಿಗೆ ಓಬವ್ವ ವೃತ್ತದಿಂದ ಆರಂಭವಾಗಿ ಜಿಲ್ಲಾಧಿಕಾರಿ ಕಚೇರಿ ತಲುಪಿ ತಮ್ಮ ಬೇಡಿಕೆ ಈಡೇರಿಸುವಂತೆ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಪಟ್ಟು ಹಿಡಿದ ವಿದ್ಯಾರ್ಥಿ ಸಮೂಹ ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
Last Updated : Feb 5, 2020, 2:56 PM IST