ವಿದ್ಯುತ್ ಟ್ರಾನ್ಸ್‌ಫಾರ್ಮರ್ ಬದಲಾವಣೆಗೆ ಆಗ್ರಹ: ಜೆಸ್ಕಾಂ ಕಚೇರಿಗೆ ಗ್ರಾಮಸ್ಥರಿಂದ ಮುತ್ತಿಗೆ
🎬 Watch Now: Feature Video
ವಿದ್ಯುತ್ ಟ್ರಾನ್ಸ್‌ಫಾರ್ಮರ್ ಬದಲಾವಣೆಗೆ ಆಗ್ರಹಿಸಿ ರಾಯಚೂರು ಜಿಲ್ಲೆಯ ಮರಳಿ ಗ್ರಾಮಸ್ಥರು ನಾಗಲಾಪುರ ಗ್ರಾಮದಲ್ಲಿನ ಕೆಇಬಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಾರೆ. ಲಿಂಗಸೂಗೂರು ತಾಲೂಕಿನ ನಾಗಲಾಪುರ ಗ್ರಾಮದಲ್ಲಿ ವಿದ್ಯುತ್ ಟ್ರಾನ್ಸ್‌ಫಾರ್ಮರ್ ಕಳೆದ ಎರಡು ತಿಂಗಳಿಂದ ಕೆಟ್ಟುನಿಂತಿದೆ. ಇದನ್ನು ಬದಲಾಯಿಸುವಂತೆ ಗ್ರಾಮಸ್ಥರು ಜೆಸ್ಕಾಂ ಅಧಿಕಾರಿಗಳಿಗೆ ಮನವಿ ಮಾಡಿದ್ದರು. ಆದ್ರೆ ಅಧಿಕಾರಿಗಳು ಗ್ರಾಮಸ್ಥರ ಮನವಿಗೆ ಸ್ಪಂದಿಸಿಲ್ಲ. ಇದರಿಂದಾಗಿ ಕಳೆದ ಎರಡು ತಿಂಗಳನಿಂದ ನಿತ್ಯ ಕತ್ತಲಿನಲ್ಲಿಯೇ ಜೀವನ ಸಾಗಿಸುವಂತಹ ಪರಿಸ್ಥಿತಿ ಗ್ರಾಮದಲ್ಲಿ ನಿರ್ಮಾಣವಾಗಿದೆ.