ರೈಲ್ವೆ ನೇಮಕಾತಿಯಲ್ಲಿ ಕನ್ನಡಿಗರಿಗೆ ಮೀಸಲಾತಿ ನೀಡುವಂತೆ ಆಗ್ರಹಿಸಿ ಪ್ರತಿಭಟನೆ

By

Published : Aug 30, 2019, 7:58 PM IST

thumbnail
ದಾವಣಗೆರೆ: ರೈಲ್ವೆ ಇಲಾಖೆಯ ಡಿ ಗ್ರೂಪ್ ದರ್ಜೆ ಹುದ್ದೆಗಳಲ್ಲಿ ಕನ್ನಡಿಗರಿಗೆ ಶೇಕಡಾ 80 ರಷ್ಟು ಮೀಸಲಾತಿ ನೀಡಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು. ನಗರದ ರೈಲ್ವೇ ನಿಲ್ದಾಣ ಬಳಿ ಪ್ರತಿಭಟನೆ ನಡೆಸಿದ ರೈಲ್ವೇ ನೇಮಕಾತಿ ಹೋರಾಟ ಸಮಿತಿ, ಬೇಡಿಕೆ ಈಡೇರಿಕೆಗೆ ಕೇಂದ್ರ ಸರ್ಕಾರವನ್ನು ಒತ್ತಾಯ ಮಾಡಿತು.  ಡಿ ಗ್ರೂಪ್ ಹುದ್ದೆಗಳಿಗೆ ಅತೀ ಹೆಚ್ಚು ಉತ್ತರ ಭಾರತದ ಅಭ್ಯರ್ಥಿಗಳೇ ನೇಮಕವಾಗುತ್ತಿದ್ದಾರೆ. ಇದರಿಂದ ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ. ಆದ್ದರಿಂದ ಸ್ಥಳೀಯ ಕನ್ನಡಿಗರಿಗೆ ಶೇಕಡಾ 80ರಷ್ಟು ಮೀಸಲಾತಿ ನೀಡಬೇಕೆಂದು ಹೋರಾಟಗಾರರು ಒತ್ತಾಯ ಮಾಡಿದರು.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.