ಏನ್ ಕರ್ಮಾರೀ ಇದು.. ರಸ್ತೆಗಾಗಿ ಪ್ರತಿಭಟಿಸೋ ಸ್ಥಿತಿ ತಪ್ಪೋದ್ಯಾವಾಗ? - ಮಹಾನಗರ ಪಾಲಿಕೆ ವಿರುದ್ಧ ಘೋಷಣೆ
🎬 Watch Now: Feature Video
ವಿಜಯಪುರ: ರಸ್ತೆ ಡಾಂಬರೀಕರಣ, ಸಿಸಿ ರಸ್ತೆ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಎಸ್‌ಯುಸಿಐ ಜಿಲ್ಲಾ ಘಟಕದಿಂದ ನಗರದ ಗಾಂಧೀಜಿ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು. ಬಾಗಲಕೋಟೆ ರಸ್ತೆ, ಸುವಾಗ್ ಕಾಲೋನಿಯಲ್ಲಿ 150ಕ್ಕೂ ಅಧಿಕ ಕುಟುಂಬಗಳು ವಾಸವಿದ್ದು, ಸರಿಯಾದ ಮೂಲಸೌಕರ್ಯ ಹಾಗೂ ರಸ್ತೆಗಳಿಲ್ಲದೇ ಜನ ರಾತ್ರಿಯಾದ್ರೆ ಕತ್ತಲೆ ಪ್ರದೇಶದಲ್ಲಿ ವಾಸ ಮಾಡುವ ಸ್ಥಿತಿ ನಿರ್ಮಾಣವಾಗಿದೆ. ಸಂಬಂಧಿಸಿದ ಅಧಿಕಾರಿಗಳು ಈವರೆಗೂ ಸ್ಥಳಕ್ಕೆ ಬಂದು ಬೀದಿ ದೀಪಗಳನ್ನು ಅಳವಡಿಸದ ಕಾರಣ ಮಹಾನಗರ ಪಾಲಿಕೆ ವಿರುದ್ಧ ಘೋಷಣೆ ಕೂಗಿ ಪ್ರತಿಭಟಿಸಿದರು. ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಮಹಾನಗರ ಪಾಲಿಕೆ ಆಯುಕ್ತ ಹರ್ಷಾ ಶೆಟ್ಟಿ, ಪ್ರತಿಭಟನಾಕಾರರ ಮನವಿ ಸ್ವೀಕರಿಸಿ ಶೀಘ್ರ ತಮ್ಮ ಬೇಡಿಕೆಗಳನ್ನು ಈಡೇರಿಸುವ ಆಶ್ವಾಸನೆ ನೀಡಿದರು.