ಬೆಳಗಾವಿ: ಪ್ಲಾಸ್ಟಿಕ್ ಧ್ವಜ ನಿಷೇಧಕ್ಕೆ ಆಗ್ರಹಿಸಿ ಡಿಸಿಗೆ ಮನವಿ - ಪ್ಲಾಸ್ಟಿಕ್ ಧ್ವಜ ನಿಷೇಧಕ್ಕೆ ಆಗ್ರಹ
🎬 Watch Now: Feature Video
ಬೆಳಗಾವಿ: ರಾಷ್ಟ್ರಧ್ವಜಕ್ಕೆ ಆಗುವ ಅಪಮಾನ ತಡೆಯಲು ಪ್ಲಾಸ್ಟಿಕ್ ಧ್ವಜವನ್ನು ಸಂಪೂರ್ಣವಾಗಿ ನಿಷೇಧಿಸಬೇಕು ಎಂದು ಒತ್ತಾಯಿಸಿ ಹಿಂದೂ ಜನಜಾಗೃತಿ ಸಮಿತಿ ಪದಾಧಿಕಾರಿಗಳು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು. ಜ. 26ರ ಗಣರಾಜ್ಯೋತ್ಸವ ಹಾಗೂ ಆ. 15ರ ಸ್ವಾತಂತ್ರ್ಯೋತ್ಸವದಂದು ಪ್ಲಾಸ್ಟಿಕ್ ರಾಷ್ಟಧ್ವಜ ಬಳಕೆ ಮಾಡಿ, ನಂತರ ರಸ್ತೆಯಲ್ಲಿ ಎಸೆಯಲಾಗುತ್ತಿದೆ. ಇದರಿಂದಾಗಿ ರಾಷ್ಟ್ರಧ್ವಜಕ್ಕೆ ಅಪಮಾನವಾಗುತ್ತಿದೆ. ಹಾಗಾಗಿ ಎಲ್ಲಾ ಅಂಗಡಿಗಳಲ್ಲಿ ಪ್ಲಾಸ್ಟಿಕ್ ಧ್ವಜಗಳ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಬೇಕು. ಈ ಬಗ್ಗೆ ಸುಪ್ರೀಂ ಕೋರ್ಟ್ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಎಂದು ಮನವಿ ಮೂಲಕ ಒತ್ತಾಯಿಸಿದರು.