ರಸ್ತೆ ವಿಸ್ತರಣೆ ಕಾಮಗಾರಿ ಪೂರ್ಣಗೊಳ್ಳದಿರುವುದಕ್ಕೆ ಖಂಡನೆ: ಹೆದ್ದಾರಿ ತಡೆದು ಪ್ರತಿಭಟನೆ - Protest for not completing the road
🎬 Watch Now: Feature Video
ಕೊಳ್ಳೇಗಾಲ: ರಾಷ್ಟ್ರೀಯ ಹೆದ್ದಾರಿ 209ರ ರಸ್ತೆ ವಿಸ್ತರಣೆ ಕಾಮಗಾರಿಯು ಪೂರ್ಣಗೊಳ್ಳದಿರುವುದನ್ನು ಖಂಡಿಸಿ ಇಲ್ಲಿನ ಗ್ರಾಮಸ್ಥರು ಹಾಗೂ ರೈತ ಸಂಘಟನೆ ಪ್ರತಿಭಟನೆ ನಡೆಸಿತು. ಬೆಳಗ್ಗೆ 10 ಗಂಟೆಗೆ ರಸ್ತೆಗಿಳಿದ ನೂರಾರು ಗ್ರಾಮಸ್ಥರು ಹಾಗೂ ರೈತ ಸಂಘದ ಕಾರ್ಯಕರ್ತರು ಘೋಷಣೆ ಕೂಗುತ್ತಾ ತ್ವರಿತವಾಗಿ ರಸ್ತೆ ಕಾಮಗಾರಿ ಪೂರ್ಣಗೊಳಿಸಬೇಕೆಂದು ಆಗ್ರಹಿಸಿದರು. ಈ ವೇಳೆ ಮಾತನಾಡಿದ ಪ್ರತಿಭಟನೆ ನೇತೃತ್ವ ವಹಿಸಿದ್ದ ತಾಲೂಕು ರೈತ ಸಂಘದ ಅಧ್ಯಕ್ಷ ಗೌಡೇಗೌಡ, 15 ದಿನಗಳೊಳಗೆ ರಸ್ತೆ ಕಾಮಗಾರಿ ಪೂರ್ಣವಾಗದಿದ್ದರೆ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿ ಪ್ರತಿಭಟನೆ ಕೈಬಿಟ್ಟರು.