ಮಾನವ ಸಂಪನ್ಮೂಲ ಗುತ್ತಿಗೆ ಏಜೆನ್ಸಿಯಲ್ಲೂ ಮೀಸಲಾತಿಗೆ ಆಗ್ರಹಿಸಿ ಪ್ರತಿಭಟನೆ.. - protest for reservation in human resource agencies
🎬 Watch Now: Feature Video
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಗುತ್ತಿಗೆದಾರರಿಗೆ ಹೊರಗುತ್ತಿಗೆ ಏಜೆನ್ಸಿಗಳಿಗೆ ಕರೆಯಲಾಗುವ ಟೆಂಡರ್ಗಳಲ್ಲಿ ಮೀಸಲಾತಿ ನೀಡಬೇಕು ಎಂದು ಒತ್ತಾಯಿಸಿ ಮಾದಿಗ ಮೀಸಲಾತಿ ಹೋರಾಟ ಸಮಿತಿ ಕಾರ್ಯಕರ್ತರು ಶಿವಮೊಗ್ಗದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.ರಾಜ್ಯ ಸರ್ಕಾರದ ಆರ್ಥಿಕ ಸಚಿವಾಲಯ ಹಾಗೂ ಕರ್ನಾಟಕ ಸರ್ಕಾರ ಕರೆಯುವ ಸಿವಿಲ್ ಕಾಮಗಾರಿಗಳಿಗೆ ಪರಿಶಿಷ್ಟ ಜಾತಿ ಮತ್ತು ಪಂಗಡದ ಗುತ್ತಿಗೆದಾರರಿಗೆ ಗುತ್ತಿಗೆಯಲ್ಲಿ ಮೀಸಲಾತಿ ನಿಗದಿಪಡಿಸಿರುವುದು ಸ್ವಾಗತಾರ್ಹ. ಇದರ ಜತೆಗೆ ಹೊರಗುತ್ತಿಗೆ ಏಜೆನ್ಸಿಗಳಿಗೆ ಕರೆಯಲಾಗುವ ಟೆಂಡರ್ಗಳಲ್ಲೂ ಮೀಸಲಾತಿ ನೀಡಬೇಕು ಎಂದು ಒತ್ತಾಯಿಸಿದರು.