ಆನ್ಲೈನ್ ಪರೀಕ್ಷಾ ಪದ್ಧತಿ ಖಂಡಿಸಿ ವಿದ್ಯಾರ್ಥಿಗಳ ಪ್ರತಿಭಟನೆ - chitradurga protest latest news
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-5661043-thumbnail-3x2-ctd.jpg)
ಸರ್ಕಾರ ಜಾರಿಗೆ ತಂದಿರುವ ಐಟಿಐ ಕಾಲೇಜುಗಳ ಆನ್ಲೈನ್ ಪರೀಕ್ಷಾ ಪದ್ಧತಿ ರದ್ದುಗೊಳಿಸುವಂತೆ ಎಐಡಿವೈಒ ಸಂಘಟನೆ ನೇತೃತ್ವದಲ್ಲಿ ವಿದ್ಯಾರ್ಥಿಗಳು ಬೀದಿಗಿಳಿದು ಪ್ರತಿಭಟನೆ ನಡೆಸಿದರು. ನಗರದ ಒನಕೆ ಓಬವ್ವ ವೃತ್ತದಲ್ಲಿ ಜಮಾಯಿಸಿದ ಐಟಿಐ ವಿದ್ಯಾರ್ಥಿಗಳು, ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟಿಸುವ ಮೂಲಕ ಆಕ್ರೋಶ ಹೊರಹಾಕಿದರು. ಇನ್ನು ಪರೀಕ್ಷಾ ಶುಲ್ಕ ಹೆಚ್ಚಳ ಖಂಡಿಸಿ ಕೂಡಾ ಕೆಂಡಾಮಂಡಲರಾದ ವಿದ್ಯಾರ್ಥಿಗಳು, ಕೂಡಲೇ ಪರೀಕ್ಷಾ ಪದ್ಧತಿ ರದ್ದುಗೊಳಿಸುವಂತೆ ಸರ್ಕಾರಕ್ಕೆ ಒತ್ತಾಯಿಸಿ ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.