ಧಾರವಾಡ: ಮಹಾರಾಷ್ಟ್ರ ಸಿಎಂ ಹೇಳಿಕೆ ಖಂಡಿಸಿ ಮರಾಠ ಕ್ರಾಂತಿ ಮೋರ್ಚಾ ಪ್ರತಿಭಟನೆ - Protest in Dharwad against Maharashtra CM statement
🎬 Watch Now: Feature Video
ಧಾರವಾಡ: ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿಕೆಯನ್ನು ವಿರೋಧಿಸಿ ಮರಾಠ ಕ್ರಾಂತಿ (ಮೌನ) ಮೋರ್ಚಾದಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಮೋರ್ಚಾ ಕಾರ್ಯಕರ್ತರು ಮಹಾರಾಷ್ಟ್ರ ಮುಖ್ಯಮಂತ್ರಿ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಜೊತೆಗೆ ಬೆಳಗಾವಿ, ಕಾರವಾರ, ನಿಪ್ಪಾಣಿ ರಾಜ್ಯದ ಅವಿಭಾಜ್ಯ ಅಂಗ, ಒಂದಿಂಚು ಜಾಗವನ್ನು ಕನ್ನಡಗರು ಬಿಟ್ಟು ಕೊಡುವುದಿಲ್ಲ ಎಂದು ಸಂದೇಶ ರವಾನಿಸಿದರು. ಬೆಳಗಾವಿ ಗಡಿಯಲ್ಲಿ ಕೆಲವರು ಶಾಂತಿ ಕದಡುವ ಕೆಲಸ ಮಾಡುತ್ತಿದ್ದಾರೆ. ಇಂತಹ ಹೇಳಿಕೆಗಳನ್ನು ಮುಂದುವರೆಸಿದ್ರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಸಿದರು.