ಹಥ್ರಾಸ್ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ, ಕೊಲೆ ಖಂಡಿಸಿ ಪ್ರತಿಭಟನೆ - ಧಾರವಾಡದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ
🎬 Watch Now: Feature Video
ಧಾರವಾಡ: ಉತ್ತರ ಪ್ರದೇಶದ ಹಥ್ರಾಸ್ನಲ್ಲಿ ಯುವತಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಖಂಡಿಸಿ ಆಲ್ ಎಐಡಿಎಸ್ಒ ಮತ್ತು ಎಐಡಿವೈಒ ಮಹಿಳಾ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ್ದ ಸಂಘಟನೆಯ ಕಾರ್ಯಕರ್ತರು, ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪ್ರಕರಣದ ತನಿಖೆಯನ್ನು ತ್ವರಿತಗೊಳಿಸಿ, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದರು.