ಮೈಸೂರು: ಉಗ್ರ ರೂಪ ತಳೆದ ಪ್ರತಿಭಟನೆ... ರೈತರು-ಪೊಲೀಸರ ನಡುವೆ ಮಾತಿನ ಚಕಮಕಿ - ಟ್ರ್ಯಾಕ್ಟರ್ ಪರೇಡ್
🎬 Watch Now: Feature Video
ಮೈಸೂರು: ನಾಳೆ ನಡೆಯಲಿರುವ ಟ್ರ್ಯಾಕ್ಟರ್ ಪರೇಡ್ಗೆ ಅನುಮತಿ ನೀಡುವಂತೆ ರೈತರು ಪ್ರತಿಭಟನೆ ನಡೆಸುತ್ತಿದ್ದು, ಈ ವೇಳೆ ಪೊಲೀಸರು ಹಾಗೂ ಪ್ರತಿಭಟನಾನಿರತರ ನಡುವೆ ಮಾತಿನ ಚಕಮಕಿ ನಡೆದಿದೆ. ಇಲ್ಲಿನ ರಾಮಸ್ವಾಮಿ ವೃತ್ತದಲ್ಲಿ ಪ್ರತಿಭಟಿಸುತ್ತಿದ್ದಾಗ ಪೊಲೀಸರು ತಡೆಯಲು ಮುಂದಾಗಿದ್ದು, ಯುವತಿಯರನ್ನು ಎಳೆದಾಡಿದ್ದಾರೆ ಎಂದು ಆರೋಪಿಸಲಾಗಿದೆ. ಇದರಿಂದ ಕೆರಳಿದ ಪ್ರತಿಭಟನಾಕಾರರು ಪೊಲೀಸರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.