ಅಂಗನವಾಡಿ ಕೇಂದ್ರಗಳಲ್ಲಿ ಎಲ್​ಕೆಜಿ, ಯುಕೆಜಿ ಪ್ರಾರಂಭಿಸುವಂತೆ ಆಗ್ರಹಿಸಿ ರಾಯಚೂರಿನಲ್ಲಿ ಪ್ರತಿಭಟನೆ - raichur latest news

🎬 Watch Now: Feature Video

thumbnail

By

Published : Dec 4, 2019, 7:19 PM IST

ಅಂಗನವಾಡಿ ಕೇಂದ್ರಗಳಲ್ಲಿ ಎಲ್​ಕೆಜಿ, ಯುಕೆಜಿ ಪ್ರಾರಂಭಿಸುವಂತೆ ಆಗ್ರಹಿಸಿ ರಾಯಚೂರಿನಲ್ಲಿ ಸಿಐಟಿಯು ಸಂಘಟನೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಸರ್ಕಾರ ಐಸಿಡಿಎಸ್ ಯೋಜನೆಯನ್ನು ದುರ್ಬಲಗೊಳಿಸಿ, ಎಲ್​ಕೆಜಿ, ಯುಕೆಜಿಯನ್ನ ಪೂರ್ವಪ್ರಾಥಮಿಕ ಶಾಲೆಯಲ್ಲಿ ಪ್ರಾರಂಭಿಸಲು ಹೊರಟಿದ್ದು, ಇದರಿಂದ ಅಂಗನನವಾಡಿ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರಿಗೆ ತೊಂದರೆ ಉಂಟಾಗಲಿದೆ ಎಂದು ದೂರಿದ್ರು. ಈ ಕೂಡಲೇ ರಾಜ್ಯ ಸರ್ಕಾರ ಈ ನೀತಿಯನ್ನ ಕೈಬಿಟ್ಟು, ಅಂಗನವಾಡಿ ಕೇಂದ್ರಗಳಲ್ಲಿ ಎಲ್​ಕೆಜಿ, ಯುಕೆಜಿಯನ್ನ ಮುಂದುವರೆಸಬೇಕೆಂದು ಒತ್ತಾಯಿಸಿದ್ರು. ನಗರದ ಪ್ರಮುಖ ಬೀದಿಗಳಲ್ಲಿ ಜಾಥಾ ನಡೆಸಿದ ಬಳಿಕ ಜಿಲ್ಲಾಧಿಕಾರಿ ಕಚೇರಿ ಎದುರಿನ ಟಿಪ್ಪು ಸುಲ್ತಾನ್ ಗಾರ್ಡನ್​ನಲ್ಲಿ ಬಹಿರಂಗ ಸಭೆ ನಡೆಸಿದರು.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.