ಡಿಕೆಶಿ ಬಂಧನ ಖಂಡಿಸಿ ತುಮಕೂರಿನಾದ್ಯಂತ ಭಾರಿ ಪ್ರತಿಭಟನೆ: ಆಕ್ರೋಶ - ಬೆಂಕಿ ಹಚ್ಚಿ ಆಕ್ರೋಶ
🎬 Watch Now: Feature Video
ಮಾಜಿ ಸಚಿವ ಡಿಕೆ ಶಿವಕುಮಾರ್ ಬಂಧನ ಖಂಡಿಸಿ ಇಂದು ತುಮಕೂರು ಜಿಲ್ಲಾದ್ಯಂತ ಪ್ರತಿಭಟನೆ ನಡೆಸಲಾಯಿತು. ಜಿಲ್ಲೆಯ ಬಹುತೇಕ ಎಲ್ಲ ತಾಲೂಕು ಕೇಂದ್ರಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದು, ಅಲ್ಲಲ್ಲಿ ಟೈರ್ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಲಾಯಿತು. ಕುಣಿಗಲ್ ಪಟ್ಟಣದಲ್ಲಿ ಬಂದ್ ಗೆ ಕರೆ ನೀಡಲಾಗಿತ್ತು. ಸಾರ್ವಜನಿಕರಿಂದಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.