ಕರ್ನಾಟಕ ಬಂದ್: ವಿವಿಧ ಸಂಘಟನೆಗಳಿಂದ ಟೌನ್ ಹಾಲ್ ಬಳಿ ಬೃಹತ್ ಪ್ರತಿಭಟನೆ - Karnataka Bandh from Farmers
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-8965930-thumbnail-3x2-hrs.jpg)
ಬೆಂಗಳೂರು: ಕೇಂದ್ರ, ರಾಜ್ಯ ಸರ್ಕಾರಗಳ ಮಸೂದೆಗಳ ವಿರುದ್ಧ ರೈತ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಪ್ರಯಕ್ತ ನಗರದ ಟೌನ್ ಹಾಲ್ ಬಳಿ ವಿವಿಧ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸಿದವು. ಈ ವೇಳೆ ಮಾತನಾಡಿದ ರೈತ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್, ಕೇಂದ್ರ, ರಾಜ್ಯ ಸರ್ಕಾರಗಳ ಕೃಷಿ ಸಂಬಂಧಿತ ಮಸೂದೆಗಳು ರೈತರನ್ನ ದಿವಾಳಿ ಮಾಡುತ್ತವೆ. ಕಾರ್ಪೋರೇಟ್ ಕಂಪನಿಗಳ ಮೂಲಕ ದರೋಡೆ ಮಾಡಿಸಿ ರೈತರಿಗೆ ವಂಚಿಸುವ ಹುನ್ನಾರ ಇದರ ಹಿಂದೆ ಇದೆ ಎಂದು ದೂರಿದರು.