ನಾಲ್ಕನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ: ಪೌರತ್ವ ತಿದ್ದುಪಡಿ ಕಾಯ್ದೆ ವಾಪಸ್ ಪಡೆಯುವಂತೆ ಆಗ್ರಹ - dharawad Protest
🎬 Watch Now: Feature Video

ಧಾರವಾಡ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಗರದಲ್ಲಿ ಮುಸ್ಲಿಂ ಸಂಘಟನೆಗಳು ನಡೆಸುತ್ತಿರುವ ಪ್ರತಿಭಟನೆ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಈ ಪ್ರತಿಭಟನೆ ನಡೆಸಲಾಗುತ್ತಿದೆ. ನಗರದಲ್ಲಿರುವ ಎಲ್ಲಾ ಜಮಾಅತ್ಗಳಿಂದ ಈ ಹೋರಾಟಕ್ಕೆ ಬೆಂಬಲ ನೀಡಲಾಗುತ್ತಿದ್ದು, ನಿತ್ಯ ಎರಡು ಜಮಾಅತ್ಗಳು ಪ್ರತಿಭಟನೆಯಲ್ಲಿ ಭಾಗವಹಿಸುತ್ತಿವೆ. ಇಂದು ನಡೆದ ಪ್ರತಿಭಟನೆ ವೇಳೆ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಹಾಕಿದ ಪ್ರತಿಭಟನಾಕಾರರು ಕೂಡಲೇ ಈ ಕಾಯ್ದೆಯನ್ನು ಹಿಂಪಡೆಯುವಂತೆ ಒತ್ತಾಯಿಸಿದರು.