ಸರೋಜಿನಿ ಮಹಿಷಿ ವರದಿ ಜಾರಿ ಆಗ್ಲೇಬೇಕು: ಸಿ.ಪಿ.ಕೃಷ್ಣಕುಮಾರ್ - ಕನ್ನಡಪರ ಸಂಘಟನೆಗಳ ಪ್ರತಿಭಟನೆ
🎬 Watch Now: Feature Video
ಮೈಸೂರು: ಕರ್ನಾಟಕದಲ್ಲಿ ಸರೋಜಿನಿ ಮಹಿಷಿ ವರದಿ ಜಾರಿಯಾಗಬೇಕೆಂದು ಸಾಹಿತಿ ಸಿ.ಪಿ.ಕೃಷ್ಣಕುಮಾರ್ ಒತ್ತಾಯಿಸಿದರು. ಇಂದು ಕನ್ನಡ ಪರ ಸಂಘಟನೆಗಳ ಜೊತೆ ಸೇರಿ ಪ್ರತಿಭಟನೆಗಿಳಿದ ಸಾಹಿತಿ ಸಿ.ಪಿ.ಕೆ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿದರು. ಈ ವೇಳೆ ಮಾತನಾಡಿದ ಅವರು, ಇದು ಕನ್ನಡಿಗರ ಅನ್ನದ ಪ್ರಶ್ನೆ. ಇದು ಜಾರಿಯಾಗಿ ಸಾಕಷ್ಟು ಸಮಯವಾಗಿದೆ. ಇದರಿಂದ ರಾಜ್ಯದ ಜನರಿಗೆ ಸಾಕಷ್ಟು ಅನುಕೂಲವಿದೆ. ವರದಿ ಜಾರಿ ಮಾಡಬೇಕೆಂಬ ಬೇಡಿಕೆಯಿಟ್ಟರು. ಈ ವೇಳೆ ಪ್ರತಿಭಟನೆಯಲ್ಲಿ ಕನ್ನಡಪರ ಸಂಘಟನೆಯ ಕಾರ್ಯಕರ್ತರು ಜಮಾಯಿಸಿದ್ದರು.