ಕಾರ್ಮಿಕ ವಿರೋಧಿ ಕಾಯ್ದೆಗಳ ತಿದ್ದುಪಡಿ ಖಂಡಿಸಿ ಪ್ರತಿಭಟನೆ - hubli
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-9674682-thumbnail-3x2-vid.jpg)
ಹುಬ್ಬಳ್ಳಿ: ಕಾರ್ಮಿಕ ವಿರೋಧಿ ಕಾಯ್ದೆಗಳ ತಿದ್ದುಪಡಿ ಹಾಗೂ ಸಾರ್ವಜನಿಕ ವಲಯ ಸಂಸ್ಥೆಗಳ ಖಾಸಗೀಕರಣ ಖಂಡಿಸಿ, ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ನೀಡಿರುವ ಬಂದ್ ಹಿನ್ನೆಲೆಯಲ್ಲಿ ವಿವಿಧ ಸಂಘಟನೆಗಳು ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪ್ರತಿಭಟನಾ ಸಭೆ ನಡೆಸಿದರು. ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಕಾರ್ಮಿಕ, ರೈತ ವಿರೋಧಿ ಬಿಲ್ಗಳನ್ನು ಜಾರಿಗೆ ತರುವ ಮೂಲಕ ಮೋಸ ಎಸಗುತ್ತಿದ್ದು, ಕೂಡಲೇ ಈ ಮಾರಕವಾದ ಕಾನೂನುಗಳನ್ನು ವಾಪಸ್ ಪಡೆಯುವಂತೆ ಸರ್ಕಾರಕ್ಕೆ ಆಗ್ರಹಿಸಿದರು.