ವಕೀಲರ ರಕ್ಷಣಾ ಕಾಯ್ದೆ ಜಾರಿ ಮಾಡುವಂತೆ ಆಗ್ರಹಿಸಿ ವಕೀಲರ ಪ್ರತಿಭಟನೆ - Haveri news
🎬 Watch Now: Feature Video
ಹಾವೇರಿ: ರಾಜ್ಯ ಸರ್ಕಾರ ವಕೀಲರ ರಕ್ಷಣಾ ಕಾಯ್ದೆ ಜಾರಿಗೆ ತರಲು ಮುಂದಾಗಬೇಕೆಂದು ಹಾವೇರಿಯಲ್ಲಿ ವಕೀಲರು ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದಾರೆ. ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಮಾನವ ಸರಪಳಿ ರಚಿಸಿದ ವಕೀಲರು ಅಸಮಾಧಾನ ಹೊರಹಾಕಿದ್ದಾರೆ. ರಾಜ್ಯದಲ್ಲಿ ವಕೀಲರಿಗೆ ರಕ್ಷಣೆ ಇಲ್ಲದಂತಾಗಿದೆ, ಹೀಗಾಗಿ ವಕೀಲರ ರಕ್ಷಣಾ ಕಾಯ್ದೆ ಜಾರಿಗೆ ಬರುವವರೆಗೆ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು. ನಂತರ ಹಾವೇರಿ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿ, ಹೊಸಪೇಟೆ ಘಟನೆಯಿಂದ ಎಚ್ಚೆತ್ತು ತಮ್ಮ ನೆರವಿಗೆ ಧಾವಿಸಬೇಕು ಎಂದು ಆಗ್ರಹಿಸಿದರು.