ಉದ್ಧವ್ ಠಾಕ್ರೆ ಹೇಳಿಕೆ ಖಂಡಿಸಿ ದಾವಣಗೆರೆಯಲ್ಲಿ ಪ್ರತಿಭಟನೆ - davanagere protest latest news
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-5562885-thumbnail-3x2-dvng.jpg)
ಬೆಳಗಾವಿ ವಿಚಾರದಲ್ಲಿ ಪದೇ ಪದೇ ಖ್ಯಾತೆ ತೆಗೆದು ಕನ್ನಡಿಗರನ್ನು ಕೆರಳಿಸುತ್ತಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ದವ್ ಠಾಕ್ರೆ ಹೇಳಿಕೆ ಖಂಡಿಸಿ ಕರ್ನಾಟಕ ನವನಿರ್ಮಾಣ ವೇದಿಕೆ ವತಿಯಿಂದ ಪ್ರತಿಭಟನೆ ನಡೆಯಿತು. ನಗರದ ಜಯದೇವ ಸರ್ಕಲ್ನಲ್ಲಿ ಪ್ರತಿಭಟನೆ ಮಾಡಿದ ಪ್ರತಿಭಟನಾಕಾರರು, ಬೆಳಗಾವಿ ಜಿಲ್ಲೆಯ ಗಡಿಭಾಗದ ಹಳ್ಳಿಗಳು ಮಹಾರಾಷ್ಟ್ರಕ್ಕೆ ಸೇರುತ್ತವೆ. ಅವುಗಳನ್ನ ಪಡೆದುಕೊಳ್ಳುತ್ತೇವೆ ಎಂದು ಹೇಳಿಕೆ ನೀಡಿ ಕನ್ನಡಿಗರನ್ನ ಪ್ರಚೋದಿಸಲಾಗುತ್ತಿದೆ. ಈ ಹೇಳಿಕೆಯನ್ನು ಖಂಡಿಸಿದ ಕರ್ನಾಟಕ ನವನಿರ್ಮಾಣ ವೇದಿಕೆ ಯಾವುದೇ ಕಾರಣಕ್ಕೂ ರಾಜ್ಯದ ಒಂದು ತುಂಡು ಜಾಗವನ್ನ ಮಹಾರಾಷ್ಟ್ರಕ್ಕೆ ಬಿಟ್ಟು ಕೊಡುವ ಸಾಧ್ಯತೆ ಇಲ್ಲ. ರಾಜ್ಯದ ಗಡಿ, ನೆಲ ವಿಚಾರಕ್ಕೆ ಬಂದರೆ ರಕ್ತವನ್ನಾದರೂ ಚೆಲ್ಲುತ್ತೇವೆ ಎಂದು ಆಕ್ರೋಶ ವ್ತಕ್ತಪಡಿಸಿದ್ದಾರೆ.