ಪಾಕ್ ಪರ ಘೋಷಣೆ ಖಂಡಿಸಿ ಕೊಡಗಿನಲ್ಲಿ ಹಿಂದೂಪರ ಸಂಘಟನೆಯಿಂದ ಪ್ರತಿಭಟನೆ - kodagu protest latest news
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-6154827-thumbnail-3x2-protest.jpg)
ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಅಮೂಲ್ಯ ವಿರುದ್ಧ ಹಿಂದೂ ಸಂಘಟನೆ ಕಾರ್ಯಕರ್ತರು ನಾಪೋಕ್ಲುವಿನಲ್ಲಿ ಪ್ರತಿಭಟನೆ ನಡೆಸಿದರು. ಮಡಿಕೇರಿ ತಾಲೂಕಿನ ನಾಪೋಕ್ಲು ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ದೇಶ ವಿರೋಧಿ ಹೇಳಿಕೆ ನೀಡಿರುವ ಅಮೂಲ್ಯ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು. ಹಾಗೆಯೇ ಅಮೂಲ್ಯಳನ್ನು ದೇಶದಿಂದ ಗಡಿಪಾರು ಮಾಡುವಂತೆ ಆಗ್ರಹಿಸಿದರು.