ಕ್ಷುಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಮಾರಾಮಾರಿ: ಇಬ್ಬರಿಗೆ ಗಂಭೀರ ಗಾಯ - ಎರಡು ಗುಂಪುಗಳ ಮಧ್ಯೆ ಮಾರಾಮಾರಿ
🎬 Watch Now: Feature Video
ರಾಯಚೂರು: ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ಮಧ್ಯೆ ಮಾರಾಮಾರಿ ನಡೆದು ಐದಾರು ಜನರು ಗಾಯಗೊಂಡಿರುವ ಘಟನೆ ಜಿಲ್ಲೆಯ ಮಸ್ಕಿ ತಾಲೂಕಿನ ಹಸಮಕಲ್ ಗ್ರಾಮದಲ್ಲಿ ನಡೆದಿದೆ. ಇದರಲ್ಲಿ ಇಬ್ಬರು ವ್ಯಕ್ತಿಗಳು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಚಿಕಿತ್ಸೆಗಾಗಿ ಲಿಂಗಸೂಗೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನಾ ಸ್ಥಳಕ್ಕೆ ಬಳಗಾನೂರು ಠಾಣೆ ಪೊಲೀಸರು ಭೇಟಿ ನೀಡಿ ವಿಚಾರಣೆ ನಡೆಸುತ್ತಿದ್ದಾರೆ. ಘಟನೆಯಿಂದಾಗಿ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು,ಭದ್ರತೆಗಾಗಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ.