ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ವಿರೋಧ.. ರಾಬ್ತಾ-ಎ-ಮಿಲ್ಲತ್ ಸಂಘಟನೆಯ ಪ್ರತಿಭಟನೆ.. - ರಾಯಚೂರು ಸುದ್ದಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ
🎬 Watch Now: Feature Video
ರಾಯಚೂರು: ಪೌರತ್ವ ತಿದ್ದುಪಡಿ ಕಾಯ್ದೆ (CAB) ಜಾರಿಗೆ ವಿರೋಧಿಸಿ ರಾಬ್ತಾ-ಎ-ಮಿಲ್ಲತ್ ಸಂಘಟನೆಯಿಂದ ಜಿಲ್ಲಾಧಿಕಾರಿ ಕಚೇರಿ ಮುಂದೆ ಮುಸ್ಲಿಮರು ಪ್ರತಿಭಟನೆ ನಡೆಸಿದರು. ಪ್ರತಿಭಟನೆ ನಂತರ ಜಿಲ್ಲಾಧಿಕಾರಿ ಮೂಲಕ ಪ್ರಧಾನ ಮಂತ್ರಿಗಳಿಗೆ ಮನವಿ ರವಾನಿಸಿ, ಪ್ರಜಾಪ್ರಭುತ್ವ ವಿರೋಧಿ ಕಾಯ್ದೆಯಾದ ಇದನ್ನು ಯಾವುದೇ ಕಾರಣಕ್ಕೂ ಜಾರಿಗೊಳಿಸದಂತೆ ಒತ್ತಾಯ ಮಾಡಿದರು. ಧರ್ಮಾಧಾರಿತ ಈ ಕಾಯ್ದೆಯನ್ನು ಕೂಡಲೇ ಕೈಬಿಡಬೇಕೆಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಪ್ರತಿಭಟನೆಗೆ ಜನಾಂದೋಲನಾ ಮಹಾಮೈತ್ರಿ ಹಾಗೂ ವಿವಿಧ ಸಂಘಟನೆಗಳ ಸದಸ್ಯರು ಬೆಂಬಲ ನೀಡಿದರು.