ರಾಜ್ಯ ಸರ್ಕಾರದ ಲಾಕ್ಡೌನ್ ಆದೇಶಕ್ಕೆ ರಾಯಚೂರು ಸ್ತಬ್ಧ - ಜಿಲ್ಲೆಯ ಏಳು ತಾಲೂಕುಗಳಲ್ಲಿ ತುರ್ತು ಸೇವೆ
🎬 Watch Now: Feature Video
ಕೊರೊನಾ ಸೋಂಕು ಹರಡುವಿಕೆ ತಡೆಗಟ್ಟಲು ರಾಜ್ಯ ಸರ್ಕಾರ ಲಾಕ್ಡೌನ್ಗೆ ಆದೇಶಿಸಿರುವ ಹಿನ್ನೆಲೆ ರಾಯಚೂರು ಜಿಲ್ಲೆ ಸಂಪೂರ್ಣವಾಗಿ ಬಂದ್ ಆಗಿದೆ. ಜಿಲ್ಲೆಯ ಏಳು ತಾಲೂಕುಗಳಲ್ಲಿ ತುರ್ತು ಸೇವೆ, ಅಗತ್ಯ ವಸ್ತುಗಳ ಅಂಗಡಿ-ಮುಂಗಟ್ಟು ಹೊರತುಪಡಿಸಿದರೆ ಉಳಿದಂತೆ ಎಲ್ಲಾ ಅಂಗಡಿಗಳನ್ನು ಸ್ಥಗಿತಗೊಳಿಸಲಾಗಿದೆ. ರಾಯಚೂರು ನಗರದ ಪ್ರಮುಖ ಸರ್ಕಲ್‌ನಲ್ಲಿ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ. ಪ್ರಮುಖ ರಸ್ತೆಯಲ್ಲಿ ವಾಹನಗಳ ಓಡಾಡಟಕ್ಕೆ ಬ್ರೇಕ್ ಹಾಕಲಾಗಿದೆ.