ಬೀದರ್ ಜಿಲ್ಲೆಯಾದ್ಯಂತ ಮಳೆ : ತುಂಬಿ ಹರಿದ ಹಳ್ಳಗಳು - Rain in the Bidar
🎬 Watch Now: Feature Video
ಎರಡು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಭಾಲ್ಕಿ ತಾಲೂಕಿನ ನಿಲಮನಳ್ಳಿ ಗ್ರಾಮದಲ್ಲಿನ ಸೇತುವೆ ಮೇಲೆ ನೀರು ಹರಿದಿದೆ. ಇದರಿಂದ 2 ಗಂಟೆ ಕಾಲ ಸಾರ್ವಜನಿಕರ ಸಂಚಾರಕ್ಕೆ ತೊಂದರೆಯಾಗಿತ್ತು. ಕಳೆದ 6 ವರ್ಷದ ಈ ಪ್ರಮಾಣದಲ್ಲಿ ಮಳೆಯಾಗಿದೆ ಎಂದು ಗ್ರಾಮಸ್ಥರು ಹೇಳಿದ್ದಾರೆ. ಅಲ್ಲದೇ ಬಸವಕಲ್ಯಾಣ, ಭಾಲ್ಕಿ, ಔರಾದ್, ಕಮಲನಗರ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಅಲ್ಲಲ್ಲಿ ಬಿಡದೆ ಮಳೆಯಾಗಿದ್ದು, ಮುಂಗಾರು ಹಂಗಾಮಿನ ಬೆಳೆಗಳಿಗೆ ಸ್ವಲ್ಪ ಮಟ್ಟಿಗೆ ಸಹಕಾರಯಾಗಿದೆ.